ಬೆಳಗಾವಿ – ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರ್ವ ಆರಂಭವಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಇಂದು ಸಿಬಿಟಿ ಬಸ್ ನಿಲ್ಧಾಣದ ಕಾಮಗಾರಿಗೆ ಚಾಲನೆ ನೀಡಿದ್ದಾರೆ
ಬೆಳಗಾವಿಯ ನಗರ ಬಸ್ ನಿಲ್ಧಾಣಕ್ಕೆ 32 ಕೋಟಿ ಬೆಳಗಾವಿ ಉತ್ತರ ,ದಕ್ಷಿಣ ಮತಕ್ಷೇತ್ರಗಳಲ್ಲಿ ಸ್ಮಾರ್ಟ್ ರಸ್ತೆ,ಗಳ ನಿರ್ಮಾಣ ಸೈಕಲ್ ಟ್ರ್ಯಾಕ್ ನಿರ್ಮಾಣ ಸೇರಿದಂತೆ ಒಟ್ಟು 264 ಕೋಟಿ ರೂವೆಚ್ಚದ ಕಾಮಗಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಇಂದು ಚಾಲನೆ ನೀಡಿದರು
ಈ ಸಂಧರ್ಭದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ ಬೆಳಗಾವಿ ದಕ್ಷಿಣ ಮತ್ತು ಉತ್ತರ ಮತಕ್ಷೇತ್ರಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಚಾಲನೆ ಕೊಟ್ಟಿದ್ದೇವೆ ಹಂತ ಹಂತವಾಗಿ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿದುತ್ತೇವೆ ಎಂದು ಸಚಿವರು ಹೇಳಿದರು
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ದಿಸಲು ಅನೇಕ ಜನ ಆಕಾಂಕ್ಷಿಗಳು ಮುಂದೆ ಬಂದಿದ್ದಾರೆ ಕಾಂಗ್ರೆಸ್ ಹೈಕಮಾಂಡ್ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ಕೊಡಲು ನಿರ್ಧರಿಸಿದೆ ಟಿಕೆಟ್ ಯಾರಿಗೆ ಅನ್ನೋದನ್ನು ಕಾಂಗ್ರೆಸ್ ಹೈಕಮಾಂಡ್ ತೀರ್ಮಾಣ ಮಾಡುತ್ತದೆ ಎಂದರು
ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಶಮನಗೊಂಡಿದೆ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಸತೀಶ್ ಜಾರಕಿಹೊಳಿ ಹೇಳಿದರು
ವಿಟಿಯು ಇಬ್ಬಾಗ ಆಗಲ್ಲ*
ವಿಟಿಯು ಸ್ಥಳಾಂತರವಾಗುವುದಿಲ್ಲ. ಸಿಎಂ ಕುಮಾರಸ್ವಾಮಿ ಹಾಸನದಲ್ಲಿ ಹೇಳಿದ್ದಾರೆ. ಸಾರ್ವಜನಿಕರು ಪ್ರತಿಭಟನೆ ಮಾಡುವುದು ಸೂಕ್ತವಲ್ಲ ಎಂದು ಮನವಿ ಮಾಡಿಕೊಂಡರು.
ವಿಟಿಯುವಲ್ಲಿ ಅವ್ಯವಹಾರವಾಗಿರಬಹುದು. ರಾಜ್ಯ ಪಾಲರು ಜಗನ್ನಾಥ ರೆಡ್ಡಿ ಅವರನ್ನು ಅಮಾತು ಮಾಡಿರಬಹುದು ಈ ಕುರಿತು ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.