*ಸ್ಮಾರ್ಟ್‍ಸಿಟಿ ಕಮಾಂಡ್ ಸೆಂಟರ್- ಸಧ್ಯದಲ್ಲಿಯೇ ಲೋಕಾರ್ಷಣೆ : ಕೇಂದ್ರ ಸಚಿವ ಸುರೇಶ ಅಂಗಡಿ*
ಬೆಳಗಾವಿ ನಗರದಲ್ಲಿ ಕೈಗೊಳ್ಳಲಾಗಿರುವ ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಇಂದು ಪರಿಶೀಲನೆ ನಡೆಸಿದರು.
ಬೆಳಗಾವಿ ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ನಿರ್ಮಾಣ ಆಗುತ್ತಿರುವ ಕಮಾಂಡ್ ಕಂಟ್ರೋಲ್ ಸೆಂಟರ್‍ಗೆ ಭೆಟ್ಟಿ ನೀಡಿ ಸೆಂಟರ್ ನ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಸ್ಮಾರ್ಟ್‍ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಅವರು ಕಮಾಂಟ್ ಸೆಂಟರ್ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಚಿವರಿಗೆ ಹೆಚ್ಚಿನ ಮಾಹಿತಿ ನೀಡಿದರು.
ಸ್ಮಾರ್ಟ್‍ಸಿಟಿ ಇಂಜಿನಿಯರ್ ಆರ್.ಎಸ್.ನಾಯಿಕ್ ಸೇರಿದಂತೆ ಹಲವು ಸ್ಮಾರ್ಟ್‍ಸಿಟಿ ಅಧಿಕಾರಿಗಳು ಉಪಸ್ಥಿತರಿದ್ದರು.
ನಂತರ ಮಾತನಾಡಿದ ಸಚಿವ ಸುರೇಶ ಅಂಗಡಿ ಅವರು, ಬೆಳಗಾವಿ ಸ್ಮಾರ್ಟ್ ಸಿಟಿ ಕಮಾಂಡ್ ಕೇಂದ್ರದ ಅಭಿವೃದ್ಧಿ ಕಾರ್ಯಗಳು ಮುಕ್ತಾಯದ ಹಂತದಲ್ಲಿದ್ದು ಸಧ್ಯದಲ್ಲಿಯೇ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಂದ ಲೋಕಾರ್ಪಣೆಗೊಳ್ಳಲಿದೆ ಎಂದು ತಿಳಿಸಿದರು.
ಬೆಳಗಾವಿಯನ್ನು ಸ್ಮಾರ್ಟ್‍ಸಿಟಿಯ ಮೊದಲ ಪಟ್ಟಿಯಲ್ಲೆ ಅಂದಿನ ನಗರಾಭಿವೃದ್ಧಿ ಸಚಿವರಾಗಿದ್ದ ವೆಂಕಯ್ಯ ನಾಯ್ಡು ಘೋಷಣೆ ಮಾಡಿದ್ದರು. ಈ ಸಂಬಂಧ ಅನೇಕ ಕಾಮಗಾರಿಗಳು ನಗರದಲ್ಲಿ ಪ್ರಗತಿಯಲ್ಲಿವೆ. ಈ ಸ್ಮಾರ್ಟ್‍ಸಿಟಿಗೆ ಸ್ಮಾರ್ಟ್ ತಂತ್ರಜ್ಞಾನಗಳಿಂದ ನಗರದಲ್ಲಿ ಸಿಸಿಟಿವಿ ಕ್ಯಾಮರಾ, ಜಿಪಿಎಸ್, ಸ್ಮಾರ್ಟ್‍ಪೋಲ್ ಸೇರಿ ಅನೇಕ ತಂತ್ರಜ್ಞಾನಗಳನ್ನು ಸ್ಥಾಪಿಸಲಾಗಿದೆ. ಇವುಗಳ ಮೇಲೆ ನಿಗಾವಹಿಸಲು ವಿಶ್ವೇಶ್ವರಯ್ಯ ನಗರದಲ್ಲಿ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ ಎಂದು ಅಂಗಡಿ ತಿಳಿಸಿದರು.
ಮೆಟ್ರೋ ಸಿಟಿಗಳಲ್ಲಿ ಕಮಾಂಡ್ ಸೆಂಟರ್ ಅಳವಡಿಸಲಾಗಿದೆ.ಇದರಿಂದ ಜನರಿಗೆ ಹಲವು ರೀತಿಯಲ್ಲಿ ಅನುಕೂಲ ಆಗಲಿದೆ. ಬಸ್ ಲೊಕೇಶನ್, ಕಸವಿಲೇವಾರಿ, ಟ್ರಾಫಿಕ್ ಸಮಸ್ಯೆ ಸೇರಿದಂತೆ ಅನೇಕ ರೀತಿ ಸೇವೆ ಸಮರ್ಪಕವಾಗಿ ದೊರೆಯಲಿದೆ. ಸಾರ್ವಜನಿಕರು ಸ್ಮಾರ್ಟ್‍ಸಿಟಿ ಕಾಮಗಾರಿಗಳಿಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ತಿಳಿಸಿದ್ದಾರೆ.
ಕಾಮಗಾರಿಗಳ ಅನುಷ್ಟಾನದಲ್ಲಿ ಅವ್ಯವಸ್ಥೆ ಕಂಡುಬಂದರೆ ಸಂಬಂಧಿಸಿದ ಗುತ್ತಿಗೆದಾರರೇ ಜವಾಬ್ದಾರಿರಾಗುತ್ತಾರೆ. ಬೆಳಗಾವಿ ನಗರದಲ್ಲಿ ವಿವಿಧೆಡೆ ರಸ್ತೆ ಅಭಿವೃದ್ಧಿ ಕಾಮಗಾರಿಗಳು ತೀವ್ರತೆ ಪಡೆದುಕೊಂಡಿದ್ದು, ಇದರಿಮದ ಸಾರಿಗೆ ಸಂಪರ್ಕಕ್ಕೆ ತಾತ್ಕಾಲಿಕವಾಗಿ ತೊಂದರೆಯುಂಟಾಗಲಿದ್ದು, ಇನ್ನು ಆರು ತಿಂಗಳೊಳಗಾಗಿ ಎಲ್ಲ ಕಾಮಗಾರಿಗಳು ಪೂರ್ಣಗೊಂಡು ಸರಿಹೋಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಸುರೇಶ ಅಂಗಡಿ ತಿಳಿಸಿದ್ದಾರೆ.
****