ಬೆಳಗಾವಿ: ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ ಅಂಗಡಿ ಅವರ ತಾಯಿ ಸೋಮವ್ವ ಚ. ಅಂಗಡಿ (92) ಗುರುವಾರ ನಿಧನರಾಗಿದ್ದಾರೆ.
ಅವರ ಅಂತ್ಯಕ್ರಿಯೆ ಸ್ವಗ್ರಾಮವಾದ ಬೆಳಗಾವಿ ತಾಲೂಕಿನ ಕೆ ಕೆ ಕೊಪ್ಪ ಗ್ರಾಮದಲ್ಲಿ ಇಂದು ಸಂಜೆ ನಡೆಯಲಿದೆ. ಸೋಮವ್ವ ಕಳೆದ ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರಿಗೆ ಐವರು ಪುತ್ರರು ಮತ್ತು ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ