Breaking News

SSLC ಫಲಿತಾಂಶ ಗುರುವಾರ ಸಾಧ್ಯತೆ.

ಬೆಂಗಳೂರು :ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬಹುನಿರೀಕ್ಷಿತ ಈ ಬಾರಿಯ ಪರೀಕ್ಷಾ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ನಿರೀಕ್ಷಿಸಿದ್ದ ಫಲಿತಾಂಶ ಸದ್ಯವೇ ಪ್ರಕಟವಾಗುವ ಸಾಧ್ಯತೆ ಇದೆ.ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶಮೇ ತಿಂಗಳ 4 ರಂದು ಪ್ರಕಟವಾಗಲಿದೆ ಎನ್ನಲಾಗಿದೆ.

ಶಿಕ್ಷಣ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ ಶಿಕ್ಷಣ ಇಲಾಖೆ ನೀಡಿರುವ ಕೆಲವು ಅಂಕಿಅಂಶ ಹಾಗೂ ಮಾಹಿತಿ ಆಧರಿಸಿ ಮೇ 4 ರಂದು ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಹೊರಬೀಳಲಿದೆ ಎಂದು ಅಂದಾಜಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಕರ್ನಾಟಕ SSLC ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು kseab.karnataka.gov.in ನಲ್ಲಿ ಪರಿಶೀಲಿಸಬಹುದು.

ಈ ವರ್ಷ SSLC ಪರೀಕ್ಷೆಗಳು ಮಾರ್ಚ್ 28 ರಿಂದ ಏಪ್ರಿಲ್ 11, 2023 ರವರೆಗೆ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆದವು. ಇದಲ್ಲದೆ, ಕರ್ನಾಟಕ SSLC 2023 ಉತ್ತರ ಕೀಗಳನ್ನು ಏಪ್ರಿಲ್ 17, 2023 ರಂದು ಬಿಡುಗಡೆ ಮಾಡಲಾಗಿದೆ.

SSLC ಫಲಿತಾಂಶಗಳನ್ನು 2023 ಪರಿಶೀಲಿಸುವುದು ಹೇಗೆ:
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2023 ಅನ್ನು ಪರಿಶೀಲಿಸಲು, ಎಲ್ಲಾ ಅಭ್ಯರ್ಥಿಗಳು ಕೆಳಗೆ ತಿಳಿಸಲಾದ ಹಂತಗಳನ್ನು ಅನುಸರಿಸಬೇಕು:

ಮೊದಲಿಗೆ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ ಆದ karresults.nic.in ಗೆ ಲಾಗ್ ಇನ್ ಆಗಬೇಕು.
ಮುಖಪುಟದಲ್ಲಿ, ಇರುವ ಕರ್ನಾಟಕ SSLC 10 ನೇ ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
ನಂತರ ನಿಮ್ಮ ಅರ್ಜಿ ಸಂಖ್ಯೆ, ಹುಟ್ಟಿದ ದಿನಾಂಕ ಮತ್ತು ಇತರ ವಿವರಗಳನ್ನು ನಮೂದಿಸಬೇಕು.
ಸಲ್ಲಿಸು ಬಟನ್‌ ಮೇಲೆ ಕ್ಲಿಕ್ ಮಾಡಬೇಕು. ಕರ್ನಾಟಕ SSLC 2023 ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ
ಅದನ್ನೇ ಡೌನ್‌ಲೋಡ್ ಮಾಡಿ ಮತ್ತು ಭವಿಷ್ಯಕ್ಕಾಗಿ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *