ಬೆಳಗಾವಿ, : ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿರುವ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮಕ್ಕೆ ಬುಧವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ಸೋಂಕು ಪತ್ತೆಯಾಗಿರುವುದರಿಂದ ಗ್ರಾಮಸ್ಥರು ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.
ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲ್ಪಟ್ಟಿರುವ ಗ್ರಾಮದಲ್ಲಿ ಸರ್ಕಾರದ ನಿರ್ದೇಶನದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೋಂಕು ಹರಡದಂತೆ ತಡೆಗಟ್ಟಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಗೆ ಮಾಸ್ಕ ಗಳನ್ನು ವಿತರಿಸಿದರು.
****”