ಬೆಳಗಾವಿ- ಬೆಳಗಾವಿಯ ಮಾಸ್ಟರ್ ಮೈಂಡ್ ಈಗ ಮತ್ತೊಂದು ಮಾಸ್ಟರ್ ಪ್ಲಾನ್ ಮಾಡಿದಂತೆ ಕಾಣುತ್ತಿದೆ.ಲೋಕಸಭಾ ಉಪ ಚುನಾವಣೆಯಲ್ಲಿ ಬೆಳಗಾವಿಯಿಂದ ಅಶೋಕ ಪೂಜಾರಿಯನ್ನು ಕಣಕ್ಕಿಳಿಸುವ ತಯಾರಿ ನಡೆದಿದೆ ಎನ್ನುವ ಸುದ್ಧಿ ಈಗ ಸದ್ದಿಲ್ಲದೇ ಹರಿದಾಡುತ್ತಿದೆ. ಬಿಜೆಪಿಗೆ ಟಕ್ಕರ್ ಕೊಡಲು,ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಗೋಕಾಕಿನ ಅಶೋಕ ಪೂಜಾರಿ ಅವರನ್ನುಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷದ ನಾಯಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಅಶೋಕ ಪೂಜಾರಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಶೀಘ್ರದಲ್ಲೇ ಕಾಂಗ್ರೆಸ್ …
Read More »ಮಹಾದಾಯಿ ಕಾನೂನು ತೊಡಕು ನಿವಾರಣೆ ನಂತರ ಕಾಮಗಾರಿ-ರಮೇಶ್ ಜಾರಕಿಹೊಳಿ
ಬೆಳಗಾವಿ-ಮಹಾದಾಯಿ ನದಿ ನೀರಿನ ಹಂಚಿಕೆ ಕುರಿತು ಸರ್ವೋಚ್ಛ ನ್ಯಾಯಾಲಯದ ಐತೀರ್ಪಿನ್ವಯ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಪೂರ್ಣಪ್ರಮಾಣದಲ್ಲಿ ಕಾನೂನು ತೊಡಕು ನಿವಾರಣೆಯ ನಂತರ ಕಳಸಾ ಬಂಡೂರಿ ನಾಲಾ ಯೋಜನೆಯ ಅನುಷ್ಟಾನವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ರಾಜ್ಯ ನೀರಾವರಿ ಖಾತೆ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ನದಿ ನೀರು ಹಂಚಿಕೆ ಕುರಿತು ಅಂತಿಮ ತೀರ್ಪು ಬರುವ ಜುಲೈ ತಿಂಗಳಿನಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ನಾಡಿದ್ದು …
Read More »ಬಿಜೆಪಿ ಸಿಂಬಾಲ್,ಎಂಈಎಸ್ ಕಂಗಾಲ್,ಕಾಂಗ್ರೆಸ್ಸಿಗೆ ಸವಾಲ್…!!!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಗ್ರಹಣ ಹಿಡಿದಿದೆ.ಚುನಾವಣೆ ಯಾವಾಗ ನಡೆಯುತ್ತದೆ ಅನ್ನೋದು ಗೊತ್ತಿಲ್ಲ.ಆದ್ರೆ ಚುನಾವಣೆಯ ಕಾವು ಆರಂಭವಾಗಿರುವುದು ಸತ್ಯ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸಿಂಬಾಲ್ ಮೇಲೆ ಚುನಾವಣೆ ಎದುರಿಸಲು ನಿರ್ಧರಿಸಿದೆ .ಬಿಜೆಪಿಯ ಈ ನಿರ್ಧಾರ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ನಡುಕ ಹುಟ್ಟಿಸಿದೆ.ಕಾಂಗ್ರೆಸ್ ಚಿಂತೆಗೆ ಬಿದ್ದಿದೆ ,ಜೆಡಿಎಸ್ ಬಂಡಾಯ ನಾಯಕರಿಗೆ ಬಲೆ ಹಾಕಲು ಚಿಂತನೆ ಮಾಡುತ್ತಿದೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇಷ್ಟು ದಿನ ಭಾಷಾ ಆಧಾರದ ಮೇಲೆ ಚುನಾವಣೆ ನಡೆಯುತ್ತಿತ್ತು.ಕನ್ನಡ …
Read More »ಮೀಸಲಾತಿ ರದ್ದು ಮಾಡಲು ಕೇಂದ್ರ ಸರ್ಕಾರದ ಹುನ್ನಾರ,ಬೆಳಗಾವಿ ಕಾಂಗ್ರೆಸ್ ಆರೋಪ
ಬೆಳಗಾವಿ- ಮಾನ್ಯ ಸರ್ವೋಚ್ಚ ನ್ಯಾಯಾಲಯ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂದು ಅಭಿಪ್ರಾಯ ವ್ಯೆಕ್ತ ಪಡಿಸಿದ್ದು ಇದನ್ನು ಮರು ಪರಶೀಲನೆ ಮಾಡುವಂತೆ ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗದ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ ಬೆಳಗಾವಿ ಜಿಲ್ಲಾ ಗ್ರಾಮೀಣ,ಮತ್ತು ನಗರ ಜಿಲ್ಲಾ ಘಟಕದ ಕಾರ್ಯಕರ್ತರು ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಪ್ರತಿಭಟನಾ ಸಭೆ ನಡೆಸಿ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿದರು ಗ್ರಾಮೀಣ ಜಿಲ್ಲಾ ಘಟಕದ ಅದ್ಯಕ್ಷ ವಿನಯ ನಾವಲಗಟ್ಟಿ ಮತ್ತು ನಗರ ಜಿಲ್ಲಾ ಘಟಕದ …
Read More »ಗುಂಡುರಾವ್ ,ಸಿದ್ರಾಮಯ್ಯನವರ ರಾಜೀನಾಮೆ ಅಂಗೀಕರಿಸಬೇಡಿ ಇಬ್ಬರಿಗೂ ಹೆಚ್ವಿನ ಜವಾಬ್ದಾರಿ ಕೊಡಿ
ಬೆಳಗಾವಿ- ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ಕುರಿತು ಪರಾಮರ್ಶೆ ನಡೆಯಬೇಕು ,ಕೆಪಿಸಿಸಿ ಅಧ್ಯಕ್ಷ್ಯ ದಿನೇಶ್ ಗುಂಡುರಾವ್ ಮತ್ತು ಸಿದ್ರಾಮಯ್ಯನವರು ರಾಜೀನಾಮೆ ಕೊಡುವ ಅಗತ್ಯವಿಲ್ಲ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಕಾರಣಕ್ಕೂ ಇಬ್ಬರ ರಾಜೀನಾಮೆ ಅಂಗೀಕರಿಸಬಾರದು ಎಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರಾದ ವಿನಯ ನಾವಲಗಟ್ಟಿ,ರಾಜು ಸೇಠ,ಚಿಂಗಳೆ ಒತ್ತಾಯಿಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಜಂಟೀ ಪತ್ರಿಕಾಗೋಷ್ಠಿ ನಡೆಸಿದ ಮೂವರು ಜಿಲ್ಲಾದ್ಯಕ್ಷರುಗಳು ಇಬ್ಬರು ಕಾಂಗ್ರೆಸ್ ನಾಯಕರ ರಾಜೀನಾಮೆಯಿಂದ ಕಾರ್ಯಕರ್ತರು ಆತ್ಮ …
Read More »