ಬೆಳಗಾವಿ: ಉದ್ಘಾಟನೆಗೊಂಡ ಎರಡೇ ದಿನದಲ್ಲಿ ತನ್ನ ಕಳಪೆ ಕಾಮಗಾರಿಯಿಂದ ಭಾರೀ ಚರ್ಚೆಗೀಡಾಗಿದ್ದ ಟಿಳಕವಾಡಿಯ ೩ನೇ ರೈಲ್ವೆ ಗೇಟ್ ಬಳಿಯಲ್ಲಿ ಲೆವೆಟಲ್ ಕ್ರಾಸಿಂಗ್ ಗೇಟ್ ಸಂಖ್ಯೆ ೩೮೧ಕ್ಕೆ ಬದಲಾಗಿ ನಿರ್ಮಿಸಲಾದ ರಸ್ತೆ ಮೇಲ್ಸೇತುವೆ ಕಾಮಗಾರಿ ಗುತ್ತಿಗೆದಾರನಿಗೆ ₹ ೨೦ ಲಕ್ಷ ದಂಡ ವಿಧಿಸಲಾಗಿದೆ.
ರೈಲ್ವೆ ಇಲಾಖೆಯ ಮುಖ್ಯ ಆಡಳಿತಾತ್ಮಕ ಅಧಿಕಾರಿ ನಿರ್ದೇಶನದ ಮೇರೆಗೆ ಮುಖ್ಯ ಎಂಜಿನಿಯರ್ ಈ ರೈಲ್ವೆ ರಸ್ತೆ ಮೇಲ್ಸೇತುವೆ ಕಾಮಗಾರಿ ಕುರಿತು ತನಿಖೆ ಕೈಗೊಂಡಿದ್ದರು. ರೈಲ್ವೆ ಮೇಲ್ಸೇತುವೆ ಮೇಲೆ ವಾಹನ ಸಂಚಾರಕ್ಕೆ ಯಾವುದೇ ಸಮಸ್ಯೆ ಉಂಟಾಗಿಲ್ಲ. ಅಪ್ರೋಚ್ ರಸ್ತೆ ಮತ್ತು ಗಿರ್ಡರ್ ಧಾರಾಕಾರ ಮಳೆಯಿಂದಾಗಿ ಹಾನಿಗೀಡಾಗಿದೆ. ಕೂಡಲೇ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ಡಾಂಬರೀಕರಣದಲ್ಲಿ ನಿರ್ಲಕ್ಷ ತೋರಿದ ಹಿನ್ನೆಲೆಯಲ್ಲಿ ಗುತ್ತಿಗೆದಾರನಿಗೆ ₹ ೨೦ ಲಕ್ಷ ದಂಡ ವಿಧಿಸಲಾಗಿದೆ ಎಂದು ರೈಲ್ವೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ