Breaking News

ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ..

ಬೆಳಗಾವಿ-ಉತ್ತರ ಕರ್ನಾಟಕದ ಅಭಿವೃದ್ಧಿಯ ಹರಿಕಾರ,ನೇರ ನುಡಿಯ ನಾಯಕ,ಸಚಿವ ಉಮೇಶ್ ಕತ್ತಿ ಅವರು ವಿಧಿವಶರಾದ ಹಿನ್ನಲೆಯಲ್ಲಿ ಇಂದು ಬುಧವಾರ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇಂದು ಬುಧವಾರ ಬೆಳಗ್ಗೆ 7-00 ಗಂಟೆಗೆ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ತಲುಪುತ್ತದೆ.ಅಲ್ಲಿಂದ ನೇರವಾಗಿ ಸಂಕೇಶ್ವರದ ಹೀರಾ ಶುಗರ್ಸ್ ಆವರಣದಲ್ಲಿ ಮಧ್ಯಾಹ್ನ 2-00 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಸಂಜೆ 5-00 ಗಂಟೆಗೆ ಸಚಿವ ಉಮೇಶ್ ಕತ್ತಿ ಅವರು ಹುಟ್ಟೂರು, ಹುಕ್ಕೇರಿಯ ಬೆಲ್ಲದ ಭಾಗೇವಾಡಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿದೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಸಿಂ ಹೇಳಿದ್ದಾರೆ‌.

ಇಂದು ಸಂಜೆ 5-00 ಗಂಟೆಗೆ ಬೆಲ್ಲದ ಭಾಗೇವಾಡಿಯಲ್ಲಿ ನಡೆಯುವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯಲ್ಲಿ ಸಿಎಂ ಬೊಮ್ಮಾಯಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು,ಹಲವಾರು ಜನ ಸಚಿವರು ಭಾಗಿಯಾಗಲಿದ್ದಾರೆ.

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *