Breaking News
Home / Breaking News / ಬಜೆಟ್ ಮಂಡನೆಗೆ ಮುನ್ನ ಸಮ್ಮಿಶ್ರ ಸರ್ಕಾರ ಪತನ- ಉಮೇಶ್ ಕತ್ತಿ ಭವಿಷ್ಯ

ಬಜೆಟ್ ಮಂಡನೆಗೆ ಮುನ್ನ ಸಮ್ಮಿಶ್ರ ಸರ್ಕಾರ ಪತನ- ಉಮೇಶ್ ಕತ್ತಿ ಭವಿಷ್ಯ

ಬೆಳಗಾವಿ : ಬಜೆಟ್ ಅಧಿವೇಶನ ಪೂರ್ವದಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಬಿಜೆಪಿ ಶಾಸಕ ಉಮೇಶ ಕತ್ತಿ ಹೇಳಿದರು.
ಅವರು ಸೋಮವಾರ ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬಿಜೆಪಿ ಕೆಡುವುದಿಲ್ಲ. ಬಜೆಟ್ ಅಧಿವೇಶನದ ಮೊದಲು ಸಮ್ಮಿಶ್ರ ಸರ್ಕಾರ ಪತನಗೊಳ್ಳಲ್ಲಿದೆ. ಇದಕ್ಕೆ ಉದಾಹರಣೆ ಎಂಬಂತೆ ಸಿಎಂ ಎಚ್.ಡಿ. ಕುಮಾರಸ್ವಾಮಿ ರಾಜಿನಾಮೆ ನೀಡುತ್ತೇನೆ ಎನ್ನುವುದು ನಿರ್ದಶನವಾಗಿದೆ ಎಂದರು.
ರಾಜ್ಯದಲ್ಲಿ ಹಿಂಗಾರು ಮಳೆಯಾಗದೆ ಸುಮಾರು 150ಕ್ಕೂ ಅಧಿಕ ತಾಲೂಕಿನಲ್ಲಿ ಬರಗಾಲ ಆವರಿಸಿದೆ. ಸಮ್ಮಿಶ್ರ ಸರ್ಕಾರ ಬರಗಾಲ ಎದುರಿಸಲು ವಿಫಲವಾಗಿದೆ. ಈಗಾಗಲೇ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ನೇತೃತ್ವದ ಸಚಿವ ಸಂಪುಟ ಸಮಿತಿ ಎರಡು ಬರ ಅಧ್ಯಯನ ಪ್ರವಾಸವನ್ನು ರದ್ದುಗೊಳಿಸಿದೆ. ಸರ್ಕಾರ ಬರಗಾಲ ಎದುರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಮಂಗಳವಾರ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಬರ ನಿರ್ವಹಣೆ ಕುರಿತು ಸಭೆ ನಡೆಯಲ್ಲಿದೆ. ಹುಕ್ಕೇರಿ ಕ್ಷೇತ್ರದಲ್ಲಿನ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸಮಸ್ಯೆ ಬಗ್ಗೆ ಕ್ರಮ ಕೈಗೊಳ್ಳಲು ಆಗ್ರಹಿಸಲಾಗುವುದು. ಈಗಾಗಲೇ ತಾಲೂಕಿನ ಬರ ನಿರ್ವಹಣೆ ಬಗ್ಗೆ ಅಧಿಕಾರಗಳ ಸಭೆ ನಡೆಸಲಾಗಿದೆ ಎಂದು ಶಾಸಕ ಉಮೇಶ ಕತ್ತಿ ತಿಳಿಸಿದರು.

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *