ಬೆಳಗಾವಿ- ಪ್ರಸಕ್ತ ಬಜೆಟ್ ನಲ್ಲಿ ಉತ್ತರ ಕರ್ನಾಟ ಪ್ರದೇಶಕ್ಕೆ ಅನ್ಯಾಯ ವಾಗಿರುವದನ್ನು ಖಂಡಿಸಲು ವಿವಿಧ ರಾಜಕೀಯ ಪಕ್ಷಗಳ ನಾಯಕರು ಒಗ್ಗಟ್ಟಾಗಿ ಸುವರ್ಣ ಸೌಧದ ಎದರು
ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು
ಬೆಳಗಾವಿಯ ಸುವರ್ಣ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಮುಖಂಡರು ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಧರಣಿ ನಡೆಸಿ ಅಭಿವೃದ್ಧಿಯ ಹಕ್ಕೊತ್ತಾಯ ಮಾಡಿದರು
ಸುವರ್ಣ ಸೌಧ ಉತ್ತರ ಕರ್ನಾಟಕ ಭಾಗದ ಆಡಳಿತಾತ್ಮಕ ಶಕ್ತಿ ಕೇಂದ್ರವಾಗಬೇಕು ನಿರಂತರ ಅಧಿವೇಶನ ಸುವರ್ಣ ಸೌಧದಲ್ಲಿ ನಡೆಯಬೇಕು ಬೆಳಗಾವಿ ರಾಜ್ಯದ ಎರಡನೇ ರಾಜ್ಯದಾನಿಯಾಗಿ ಘೋಷಿಸಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯ ಮಾಡಿದ್ರು
ರಾಜ್ಯ ಮಟ್ಟದ ಕಾರ್ಯಾಲಯಗಳನ್ನು ಸುವರ್ಣ ಸೌಧಕ್ಕೆ ಸ್ಥಳಾಂತರ ಮಾಡುವದು ಸೇರಿದಂತೆ ಐದು ಬೇಡಿಕೆಗಳನ್ನಿಟ್ಟುಕೊಂಡು ಧರಣಿ ಕುಳಿತ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು
ಒಂದು ವಾರದೊಳಗಾಗಿ ತಮ್ಮ ಬೇಡಿಕೆ ಈಡೇರಿಸದಿದ್ದರೆ ಉಗ್ರವಾದ ಹೋರಾಟ ಮಾಡುವುದಾಗಿ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಅದ್ಯಕ್ಷ ಅಶೋಕ ಪೂಜಾರಿ ಎಚ್ಚರಿಕೆ ನೀಡಿದ್ದಾರೆ