ಬೆಳಗಾವಿ- ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುವದರ ಮೂಲಕ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಹೋರಾಟಕ್ಕೆ ಸರ್ಕಾರವೇ ಪ್ರಚೋದಿಸುತ್ತಿದೆ ಎಂದು ಉತ್ತರ ಕರ್ನಾಟಕ ವಿಕಾಸ ವೇದಿಕೆ ಆರೋಪಿಸಿದೆ
ಪತ್ರಿಕಾಗೋಷ್ಠಿ ನಡೆಸಿದ ಉತ್ತರ ಕರ್ನಾಟಕ ವಿಕಾಸ ವೇದಿಕೆ ಅಧ್ಯಕ್ಷ ಅಶೋಕ ಪೂಜಾರಿ ವಿಧಾನಸಭೆ ಚುನಾವಣೆಯ ಬಳಿಕ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಕುದುರೆ ಏರಿದ್ದು ವಿಧಾನಸಭೆಯ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿದ ಬಳಿಕ ಇಂದು ಪತ್ರಿಕಾಗೋಷ್ಠಿ ನಡೆಸಿ ಉತ್ತರ ಕರ್ನಾಟಕಕ್ಕೆ ಯಾವ ರೀತಿ ಸರ್ಕಾರ ಬಜೆಟ್ ನಲ್ಲಿ ಅನ್ಯಾಯ ಮಾಡಿದೆ ಎನ್ನುವದರ ಬಗ್ಗೆ ಅಡಳಿತ ಪಕ್ಷದ ಹೆಚ್ ಕೆ ಪಾಟೀಲ ಅಂಕಿ ಅಂಶಗಳ ಸಮೇತ ಸದನದಲ್ಲಿ ಮಾತನಾಡಿದ್ದಾರೆ ಇದರಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದ್ದು ಸ್ಪಷ್ಠವಾಗಿದೆ ಎಂದು ಅಶೋಕ ಪೂಜಾರಿ ಆರೋಪ ಮಾಡಿದ್ದಾರೆ
ಸರ್ಕಾರ ಉತ್ತರ ಕರ್ನಾಟಕಕ್ಕೆ ನ್ಯಾಯ ದೊರಕಿಸಿಕೊಡಲು ವಿಕಾಸ ವೇದಿಕೆ ಧರಣಿ, ಮಾಡುತ್ತದೆ ಸಿಎಂ ಬಳಿ ನಿಯೋಗ ಕೊಂಡೊಯ್ಯುತ್ತದೆ ಅದಕ್ಕೂ ಸರ್ಕಾರ ಸ್ಪಂದನೆ ಮಾಡದಿದ್ದರೆ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ನಿರ್ಮಾಣಕ್ಕೆ ಹೋರಾಟ ಮಾಡುತ್ತೇವೆ ಎಂದು ಅಶೋಕ ಪೂಜಾರಿ ಎಚ್ಚರಿಕೆ ನೀಡಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ