ಬೆಳಗಾವಿ- ಉತ್ತರ ಕರ್ನಾಟಕದ ಶಕ್ತಿ ಸೌಧ ಸುವರ್ಣ ವಿಧಾನಸೌಧದ ಎದುರು ಉತ್ತರ ಕರ್ನಾಟಕದ ಅಭಿವೃದ್ಧಿ ಆಗದಿದ್ದರೆ ಹುಷಾರ್ …ಎಂದು ಗುಡುಗುತ್ತಿದ್ದಂತೆಯೇ ಮುಖ್ಯಮಂತ್ರಿ ಕುಮಾರಣ್ಣ ಕರಗಿದ್ದಾರೆ .
ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ರೈತ ನಾಯಕರ ಜೊತೆ ಸಭೆ ಮಾಡಿದ ಮುಖ್ಯಮಂತ್ರಿಗಳು ಶೀಘ್ರದಲ್ಲಿಯೇ ಕೃಷ್ಣಾ ಜಲಭಾಗ್ಯ ನಿಗಮದ ಕಚೇರಿಯನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರ ಮಾಡುತ್ತೇನೆ.ಉತ್ತರ ಕರ್ನಾಟಕದ ಅಭಿವೃದ್ಧಿ ನನ್ನ ಜವಾಬ್ದಾರಿ .ಎಂದು ಭರವಸೆ ನೀಡಿದ್ದಾರೆ.
ಮುಂದಿನ ವಾರದಿಂದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಭೇಟಿ ಕೊಡುತ್ತೇನೆ ಜನರ ಅಹವಾಲು ಕೇಳುತ್ತೇನೆ ಸುವರ್ಣ ವಿಧಾನಸೌಧಕ್ಕೆ ಮತ್ತೆ ಯಾವ ಯಾವ ಕಚೇರಿಗಳನ್ನು ಸ್ಥಳಾಂತರ ಮಾಡಬೇಕು ಎನ್ನುವದರ ಬಗ್ಗೆ ಚಿಂತನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ