ಬೆಳಗಾವಿ ನಗರದಲ್ಲಿ ಅದ್ಧೂರಿಯ ವಿಶ್ವಕರ್ಮ ಜಯಂತಿ

ಬೆಳಗಾವಿ-ನಗರದ ಕೋಟೆ ಕೆರೆ ಆವರಣದ ಹತ್ತಿರ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ವಿಶ್ವಕರ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಶಾಸಕ ಪಿರೋಜ ಶೆಠ್, ಜಿಲ್ಲಾಧಿಕಾರಿ ಎನ್.ಜಯರಾಮ್ ಸೇರಿದಂತೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಅಶೋಕ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತದ ಮುಖಾಂತರ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕುಮಾರ ಗಂಧರ್ವ ರಂಗಮಂದಿರ ತಲುಪಿತು. ಮೆರವಣಿಯಲ್ಲಿ ಕರಡಿ ಮಜಲು ಸೆರಿದಂತೆ ವಿವಿಧ ವಾಧ್ಯಮೇಳಗಳು ಭಾಗವಹಿಸಿ ಮೆರವಣಿಗೆ ಮೆರಗು ನೀಡಿದವು.
ನಂತರ ಕುಮಾರ ಗಂಧರ್ವ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಾತನಾಡಿ ಮಹಾಪುರುಷರ ಜಯಂತಿಗಳು ಕೇವಲ ಮೆರವಣಿಗೆಗೆ ಸೀಮಿತವಾಗಬಾರದು ಯಾವುದೇ ಸಮಾಜ ಶೈಕ್ಷಣಿಕವಾಗಿ ಮುಂದೆ ಬರಬೇಕಾದರೆ ಸಮಾಜದ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಬೇಕು ಎಂದರು
ಮಹಾನಗರ ಪಾಲಿಕೆ ಮಹಾಪೌರೆ ಸರಿತಾ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪವಿಭಾಗಾಧಿಕಾರಿ ರಾಜಶ್ರೀ ಜೈನಾಪೂರೆ, ಪಾಲಿಕೆಯ ಸದಸ್ಯರಾದ ಜಯಶ್ರೀ ಮಾಳಗೆ, ರಮೇಶ ಸೊಟಂಕ್ಕಿ, ರಮೇಶ ಕಳಸನ್ನವರ, ಮಾಯಾ ಕಡೋಲ್ಕರ, ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಭೀಮರಾವ ಬಡಿಗೇರ, ಅಜ್ಜಪ್ಪಾ ಬಡಿಗೇರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಉಪನಿರ್ದೇಶಕಿ ವಿಧ್ಯಾವತಿ ಭಜಂತ್ರಿ ಸೇರಿದಂತೆ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *