ಬೆಳಗಾವಿ- ಮಾರ್ಚ್ 10 ರಂದು ಸೋಮವಾರ ಬೆಳಗಾವಿ ಮಹಾನಗರಕ್ಕೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಆಗಮಿಸಲಿದ್ದಾರೆ.
ಸೋಮವಾರ ಬೆಳಗ್ಗೆ 11-30 ಕ್ಕೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವಾಟಾಳ್ ನಾಗರಾಜ್ ಅವರು ವಿವಿಧ ಕನ್ನಡಪರ ಸಂಘಟನೆಗಳ ನಾಯಕರು ಹಾಗು ಕನ್ನಡದ ಅಭಿಮಾನಿಗಳ ಜೊತೆ ಸೇರಿಕೊಂಡು ಪ್ರತಿಭಟನೆ ಮಾಡಲಿದ್ದಾರೆ.
ಎಂಇಎಸ್ ನಿಷೇಧಿಸಬೇಕು, ಬೆಳಗಾವಿ ಉಳಿಯಬೇಕು,ಬೆಳೆಯಬೇಕು,ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಆಗಬೇಕು,ಎಂಇಎಸ್ ಹಾಗೂ ಶಿವಸೇನೆಯ ಪುಂಡರನ್ನು ಬೆಳಗಾವಿಯಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ವಾಟಾಳ್ ನಾಗರಾಜ್ ಅವರು ಬೆಳಗಾವಿಯಲ್ಲಿ ಸೋಮವಾರ ಪ್ರತಿಭಟನೆ ಮಾಡಲಿದ್ದಾರೆ.