Breaking News

ಬೆಳಗಾವಿಯ ರಾಜಕಾರಣಿಗಳು ಎಂಈಎಸ್ ಏಜಂಟರು….

 

ಬೆಳಗಾವಿ – ನಾಡವಿರೋಧಿ ಹೇಳಿಕೆ ನೀಡಿದ ಕಿಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಬೇಕೆಂದು ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತ್ರತ್ವದಲ್ಲಿ ವಿವಿಧ ಕನ್ನಡ ಸಂಘಟನೆಗಳ ನಾಯಕರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರಸ್ತೆಯ ಮೇಲೆ ಮಲಗಿ ವಿನೂತನವಾಗಿ ಪ್ರತಿಭಟಿಸಿದರು
ಬೆಳಿಗ್ಗೆ ಚನ್ನಮ್ಮ ವೃತ್ತದಲ್ಲಿ ಸೇರಿದ ನೂರಾರು ಜನ ಕಾರ್ಯಕರ್ತರು ಲಕ್ಷ್ಮೀ ಹೆಬ್ಬಾಳಕರ ಅವರ ಭಾವಚಿತ್ರವನ್ನು ಹರಿದು ಹಾಕಿ ರಸ್ತೆಯ ಮೇಲೆ ಉದ್ದಕ್ಕೆ ಮಲಗಿ ಹೆಬ್ಬಾಳಕರ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದರು
ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ವಾಟಾಳ್ ನಾಗರಾಜ್ ಬೆಳಗಾವಿಯ ರಾಜಕಾರಣಿಗಳು ಎಂಈಎಸ್ ಏಜೆಂಟರು ಇಲ್ಲಿಯ ರಾಜಕಾರಣಿಗಳಿಂದ ನಾಡು ನುಡಿ ನೆಲ ಜಲದ ರಕ್ಷಣೆ ಸಾಧ್ಯವಿಲ್ಲ ಬೆಳಗಾವಿ ಕನ್ನಡಿಗರು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ನಂಬದೇ ತಮ್ಮ ಸ್ವಂತಿಕೆಯ ಬಲ ಬನ್ನು ಸಂಘಟಿಸಿ ನಾಡ ವಿರೋಧಿ ಕೃತ್ಯ. ವೆಸಗುವ ರಾಜಕಾರಣಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ವಾಟಾಳ್ ನಾಗರಾಜ್ ಕರೆ ನೀಡಿದರು
ಲಕ್ಷ್ಮೀ ಹೆಬ್ಬಾಳಕರ ಅವರು ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿ ಈಗ ಇದು ಮಾದ್ಯಮಗಳ ಸೃಷ್ಠಿ ಮಾದ್ಯಮಗಳು ಅರ್ದ ಸತ್ಯವನ್ನು ತೋರಿಸಿವೆ ಎಂದು ಲಕ್ಷ್ಮೀ ಹೆಬ್ಬಾಳಕರ ಆರೋಪ ಮಾಡುವದು ಸರಿಯಲ್ಲ ಲಕ್ಷ್ಮೀ ಹೆಬ್ಬಾಳಕರ ಕೇವಲ ಕ್ಷಮೆಯಾಚಿಸಿದರೆ ಸಾಲದು ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ವಾಟಾಳ್ ಒತ್ತಾಯಿಸಿದರು
ಲಕ್ಷ್ಮೀ ಹೆಬ್ಬಾಳಕರ ಅವರನ್ನು ಕಾಂಗ್ರೆಸ್ ಪಕ್ಷ ಕೂಡಲೇ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕು,ಸರ್ಕಾರ ಅವರನ್ನು ಗಡಿಪಾರು ಮಾಡುವದರ ಜೊತೆಗೆ ಅವರ ಹೆಸರನ್ನು ಮತದಾರ ಪಟ್ಟಿಯಿಂದ ತೆಗೆದು ಹಾಕಬೇಕು ಎಂದು ವಾಟಾಳ್ ಒತ್ತಾಯಿಸಿದರು
ಕನ್ನಡ ಮುಖಂಡ ಸಾ ರಾ ಗೋವಿಂದ ಮಾತನಾಡಿ ಲಕ್ಷ್ಮೀ ಹೆಬ್ಬಾಳಕರ ಅವರ ರಾಜಿನಾಮೆ ಮತ್ತು ಕ್ರಮಕ್ಕೆ ಒತ್ತಾಯಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಭಟಿಸುವ ಮೂಲಕ ಸರ್ಕಾರದ ಗಮನ ಸೆಳೆಯುತ್ತೇವೆ ಎಂದರು
ಕನ್ನಡ ಕಾರ್ಯಕರ್ತರು ರಸ್ತೆಯ ಮೇಲೆ ಮಲಗಿ ಪ್ರತಿಭಟಿಸುತ್ತಿರುವಾಗ ಎಸಿಪಿ ಜೈ ಕುಮಾರ್ ಅವರು ಪ್ರತಿಭಟನಾಕಾರರನ್ನು ಮನವೊಲಿಸುವ ಪ್ರಯತ್ನ ಮಾಡಿ ಇದು ಫಲ ನೀಡದ ಕಾರಣ ವಾಟಾಳ್ ಸೇರಿದಂತೆ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ಬಿಡುಗಡೆ ಮಾಡಲಾಯಿತು

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *