Breaking News

ಯಾವುದೇ ಕಾರಣಕ್ಕೂ ಸರಕಾರದ ಆದೇಶವನ್ನು ನಾವು ಒಪ್ಪೋದಿಲ್ಲ.

ಬೆಳಗಾವಿ-ಯಾವುದೇ ಕಾರಣಕ್ಕೂ ಸರಕಾರದ ಆದೇಶವನ್ನು ನಾವು ಒಪ್ಪೋದಿಲ್ಲ. ಬಿಜೆಪಿ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಹೇಳಿದರು.
ಸೋಮವಾರ ಗಾಂಧಿ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಸರಕಾರದ ಧೋರಣೆಯನ್ನು ನಾವೆಲ್ಲರೂ ಖಂಡಿಸಬೇಕು ಮುಂದೆ ಸರಕಾರ ಬದಲಾಗುತ್ತದೆ. ನಮಗೆ ನ್ಯಾಯ ಸಿಗುತ್ತೆ. ಕಳೆದ ಎರಡೂವರೆ ವರ್ಷಗಳಿಂದ ಹೋರಾಟ ಮಾಡಿದ್ದರೂ ನಮಗೆ ಸೂಕ್ತ ನ್ಯಾಯ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಮಾ.27 ರಂದು 2 ಸುತ್ತೋಲೆ ಹೊರಡಿಸಿದ್ದಾರೆ ಇದು ಖಂಡನೀಯ. 2 ಡಿ ಮೀಸಲಾತಿಯಲ್ಲಿ 52 ಜಾತಿಗಳಿವೆ ಎಲ್ಲರಿಗೂ ಸೇರಿಸಿ ಘೋಷಣೆ ಮಾಡಿದ್ದಾರೆ. ಪಂಚಮಸಾಲಿ ಲಿಂಗಾಯತರಿಗೆ ಪ್ರತ್ಯೇಕ ಮೀಸಲಾತಿ ಕೇಳಿದ್ದೇವು. ಕೇವಲ 2 ಪರ್ಸೆಂಟ್ ಮೀಸಲಾತಿ ಹೆಚ್ಚಳ ಮಾಡುವ ನಾಟಕ ಮಾಡಿದ್ದಾರೆ ಎಂದು ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮತ್ತೊಬ್ಬರ ಮೀಸಲಾತಿ ಕಸಿದುಕೊಳ್ಳುವ ಕೆಟ್ಟವರು ಲಿಂಗಾಯತರಲ್ಲ. ಕೆಲವು ರಾಜಕೀಯ ಕುತಂತ್ರಗಳು ನಾಟಕ ಮಾಡಿದ್ದಾರೆ. ವಿಜಯೋತ್ಸವ ಆಚರಣೆ ಮಾಡುತ್ತೇವೆ ಎನ್ನುತ್ತಾರೆ ನಾವುವಿದನ್ನು ಒಪ್ಪೋದಿಲ್ಲ. ವಿಜಯೋತ್ಸವ ಮಾಡುವುದಿಲ್ಲ ಸ್ವಾಮೀಜಿ ದುಃಖದಿಂದ ಕಣ್ಣೀರು ಹಾಕಿದ್ದಾರೆ. ಅವರಿಗೆ ಸಂತೋಷ ಆಗಿಲ್ಲ ಸ್ವಾಮೀಜಿ ನಮ್ಮ ಜೊತೆ ಇದ್ದಾರೆ ಮುಂದೆ ನಾವು ಹೋರಾಟ ಮಾಡುತ್ತೇವೆ ಎಂದು‌ ಎಚ್ಚರಿಸಿದರು.

ಮಾಜಿ ಸಚಿವ ವಿನಯ ಕುಲಕರ್ಣಿ, ಕಾಶಪ್ಪನವರ್ ಕುಡಿದು ಸ್ವಾಮೀಜಿ ಬಗ್ಗೆ ಮಾತನಾಡಿದ್ದಾರೆ ಸಿಸಿ ಪಾಟೀಲ್ ಹೇಳಿಕೆ ವಿಚಾರಕ್ಕೆ ಉತ್ತರಿಸಿದ ಅವರು, ಸಿಸಿ ಪಾಟೀಲ್ ಬಗ್ಗೆ ವಾಗ್ದಾಳಿ ನಡೆಸಿದ ಅವರು, ಇವರು ಕುಡಿಯೋದಿಲ್ಲವಾ ? ಸಿ.ಸಿ. ಪಾಟೀಲರ ಮನೆಯಲ್ಲಿ ದಿನಾಲೂ ಬೊಮ್ಮಾಯಿ ಏನು ಮಾಡುತ್ತಾರೆ ಚೆಕ್ ಮಾಡಿ ಎಂದರು.

ಅಪಹಾಸ್ಯವಾಗಿ ಮಾತನಾಡುವುದು ಯಾವುದೇ ನಾಯಕರಿಗೆ ಗೌರವ ತರುವಂತದಲ್ಲ. ಬಿಜೆಪಿ ಸರ್ಕಾರ ಮೀಸಲಾತಿ ವಿಚಾರದಲ್ಲಿ ಚೆಲ್ಲಾಟ ಆಡಿದೆ. ಈ ಮೀಸಲಾತಿ ಚುನಾವಣೆ ಸಲುವಾಗಿ ಮಾಡಿರುವ ಕುತಂತ್ರ.ನಾವು ವಿಜಯೋತ್ಸವ ಆಚರಣೆ ಮಾಡುವುದಿಲ್ಲ ಇದನ್ನು ತಿರಸ್ಕರಿಸುತ್ತೇವೆ ಎಂದರು.

ಬಳಿಕ ಪಂಚಮಸಾಲಿ ವೀರಶೈವ ಮೀಸಲಾತಿ ಬಿಜೆಪಿ ಸರ್ಕಾರದ ಆದೇಶ ಪತ್ರವನ್ನು ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಸುಟ್ಟು ಹಾಕಿದ ಪಂಚಮಸಾಲಿ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *