ಸವದತ್ತಿ: ವೈದ್ಯನಿಗೆ ಕಾಂಗ್ರೆಸ್ ಟಿಕೆಟ್ ಸಿಗುವ ವಿಶ್ವಾಸ್!!

ಬೆಳಗಾವಿ-ಸವದತ್ತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಮೂವರು ದಿಗ್ಗಜರಲ್ಲಿ ಪ್ರಬಲ ಪೈಪೋಟಿ ನಡೆದಿತ್ತು ಮೂವರಲ್ಲಿ ಯಾರ ಪ್ರಾಬಲ್ಯ ಹೆಚ್ಚಾಗಬಹುದು ಟಿಕೆಟ್ ಯಾರಿಗೆ ಸಿಗಬಹುದು ಎನ್ನುವ ವಿಚಾರ ಎಲ್ಲರ ಕುತೂಹಲಕ್ಕೆ ಕಾರಣವಾಗಿತ್ತು.

ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮನ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗಾಗಿ ವಿಶ್ವಾಸ ವೈದ್ಯ, ಪಂಚನಗೌಡ್ರು,ಮತ್ತು ಚೋಪ್ರಾ ನಡುವೆ ಗುದ್ದಾಟ ನಡೆದಿತ್ತು.ಇತ್ತೀಚಿಗೆ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ವಿಶ್ವಾಸ್ ವೈದ್ಯರಿಗೆ ಹರ್ಷವನ್ನುಂಟು ಮಾಡುವ ಸುದ್ದಿ ಲಭಿಸುವ ಲಕ್ಷಣಗಳು ಕಂಡುಬಂದಿವೆ.

ದೆಹಲಿಯ ಕಾಂಗ್ರೆಸ್ ಮೂಲಗಳ ಪ್ರಕಾರ,ವಿಶ್ವಾಸ್ ವೈದ್ಯರಿಗೆ ಕಾಂಗ್ರೆಸ್ ಟಿಕೆಟ್ ಲಭಿಸುವುದು ಬಹುತೇಕ ಖಚಿತವಾಗಿದೆ.ಸವದತ್ತಿಯಲ್ಲಿ ಕಾಂಗ್ರೆಸ್ ಪಕ್ಚಕ್ಕೆ ಎದುರಾಗಿದ್ದ ಕಗ್ಗಂಟು ಈಗ ಸಡಿಲವಾದಂತೆ ಕಾಣುತ್ತಿದೆ.

ವಿಶ್ವಾಸ್ ವೈದ್ಯ ಕಳೆದ ಬಾರಿಯ ಚುನಾವಣೆಯಲ್ಲಿ ಪರಾಭವಗೊಂಡ ಬಳಿಕ ಸವದತ್ತಿ ಯಲ್ಲಮ್ಮನ ಕ್ಷೇತ್ರದಲ್ಲಿ ನಿರಂತರವಾಗಿ ಓಡಾಡಿ ಕಳೆದ ಐದು ವರ್ಷದಲ್ಲಿ ಸಂಘಟನೆಯನ್ನು ಬೆಳೆಸಿಕೊಂಡಿದ್ದಾರೆ.ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ತಮ್ಮ ವರ್ಚಸ್ಸು ಹೆಚ್ವಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ನಡೆಸಿದ ಸಮೀಕ್ಷೆಯಲ್ಲಿ ವಿಶ್ವಾಸ್ ವೈದ್ಯರ ಹೆಸರು ಮುಂಚೂಣಿಯಲ್ಲಿದೆ ಎಂದು ಹೇಳಲಾಗುತ್ತಿದೆ.ಅವರಿಗೆ ಟಿಕೆಟ್ ಸಿಗುವುವುದು ಖಚಿತ ಎನ್ನಲಾಗಿದೆ.ಕಾಂಗ್ರೆಸ್ ಪಕ್ಷದ ಎರಡನೇಯ ಪಟ್ಟಿ ಬಿಡುಗಡೆಯಾದ ಬಳಿಕ ಸವದತ್ತಿ ಕ್ಷೇತ್ರದ ಎಲ್ಲ ಪ್ರಶ್ನೆಗಳಿಗೆ ಅಧಿಕೃತ ಉತ್ತರ ಸಿಗಲಿದೆ.

Check Also

ಮೂವತ್ತು ವರ್ಷಗಳ ನಂತರ ರಾಜಕೀಯ ವೈರಿಗಳ ಮಿಲನ.!!!

  ಬೆಳಗಾವಿ- ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ಆಗಿದೆ.ಕಳೆದ ಮೂರು ದಶಕಗಳಿಂದ ರಾಜಕೀಯ ಕಡುವೈರಿಗಳಾಗಿದ್ದ ಕತ್ತಿ ಕುಟುಂಬ ಹಾಗೂ …

Leave a Reply

Your email address will not be published. Required fields are marked *