ಬೆಳಗಾವಿ-ಬೌಗೋಳಿಕ ಹಾಗೂ ರಾಜಕೀಯವಾಗಿ ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿದೆ. ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯ ವಿಭಜನೆಯಾಗಬೇಕಾಗಿದೆ ಎಂದು ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಹೇಳಿದ್ದಾರೆ.
ಬೆಳಗಾವಿಯ ಕಂಗ್ರೆಸ್ ಕಚೇರಿಯಲ್ಲಿ ಭಾನುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಜಿಲ್ಲಾ ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ರಾಜಕಾರಣ ಮಾಡದೆ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಈ ಬಗ್ಗೆ ಸರ್ಕಾರಕ್ಕೆ ಒತ್ತಡ ಹೇರಿ ಜಿಲ್ಲೆಯ ವಿಭಜನೆಗೆ ಒತ್ತುನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಸಮಗ್ರ ರಾಜ್ಯದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಆದರೆ ಈ ಭಾಗದ ಸಮಸ್ಯೆಗಳ ಕುರಿತಾದ ಚರ್ಚೆಗೆ ಕಾಲಾವಕಾಶ ನಿಗದಿ ಮಾಡಲಾಗುವುದು ಎಂದು ಅವರು ಹೇಳಿದರು.
ಅಂತರ್ ರಾಜ್ಯಗಳ ನಡುವಿನ ಜಲವಿವಾದವನ್ನು ಶಾಶ್ವತವಾಗಿ ಪರಿಹಾರ ಮಾಡಲು ಹಾಗೂ ರಾಷ್ಟ್ರೀಯ ಜಲನೀತಿ ರೂಪಿಸುವುದು ಅತ್ಯಗತ್ಯ ಎಂದು ಮಾಜಿ ಸಭಾಪತಿ ವಿ.ಆರ್. ಸುದರ್ಶನ ಹೇಳಿದರು.
ಕರ್ನಾಟಕ-ತಮಿಳ್ನಾಡು ಸೇರಿದಂತೆ ದೇಶದ ವಿವಿಧ ರಾಜ್ಯಗಳ ನಡುವೆ ಇಂತಹ ಜಲವಿವಾದವಿದೆ. ರಾಜಕೀಯ ಒಕ್ಕೂಟದ ವ್ಯವಸ್ಥೆಇತ ಭದ್ರತೆಗಾಗಿ ರಾಜ್ಯ ರಾಜ್ಯಗಳ ನಡುವೆ ಉತ್ತಮ ಸಂಬಂಧಕ್ಕಾಗಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ, ಜವಾಬ್ದಾರಿಯನ್ನು ಕೇವಲ ನ್ಯಾಯಾಂಗದ ಮೇಲೆ ಹೊರಿಸದೆ ದೇಶದ ಸಂಸದರು ಹಾಗೂ ಪ್ರಧಾನಿಗಳು ಜಲವಿವಾದದ ಬಗ್ಗೆ ಮಧ್ಯಸ್ಥಿಕೆ ವಹಿಸಲು ಮುಂದಾಗಬೇಕು ಎಂದರು.
ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಸರ್ಕಾರ ಕಾನೂನಾತ್ಮಕ ಹೋರಾಟ ಮಾಡಲು ಸಕಾರ ನೇಮಕ ಮಾಡಿರುವ ನಾರಿಮನ್ ಅವರು ಸಮರ್ಥರಾಗಿದ್ದಾರೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದು, ತಾವೂ ಈ ಮಾತಿಗೆ ತಮ್ಮ ಸಹಮತಿಯೂ ಇದೆ ಎಂದು ಸುದರ್ಶನ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ್ ನಾವಲಗಟ್ಟಿ, ಬುಡಾ ಅಧ್ಯಕ್ಷ ಯುವರಾಜ ಕದಂ ಅವರಿದ್ದರು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ