ಬೆಳಗಾವಿ:
ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯದಲ್ಲಿ (ವಿಟಿಯು)ಲ್ಯಾಬ್ ಸಾಧನ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿವಿ ಉಪನ್ಯಾಸಕ ಯೋಗಾನಂದ ಎನ್ನುವವರನ್ನು ಬೆಳಗಾವಿ ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಮಹೇಶಪ್ಪ ಅವರು ವಿಟಿಯು ಕುಲಪತಿಯಾಗಿದ್ದಾಗ ಲ್ಯಾಬ್ ಸಾಧನ ಖರೀದಿಯಲ್ಲಿ ಆರು ಕೋಟಿ ರೂ. ಅವ್ಯವಹಾರ ನಡೆದಿದೆ. ವಿವಿ ಹಣವನ್ನು ದುರುಪಯೋಗ ಪಡಿಸಿಕೊಳ್ಳಲಾಗಿದೆ ಎಂದು ಈಗಿನ ರಿಜಿಸ್ಟ್ರಾರ್ ಜಗನ್ನಾಥ ಅವರು ಮಹೇಶಪ್ಪ ಸೇರಿ ನಾಲ್ವರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ಕೊಟ್ಟಿದ್ದರು.
ಆ ಹಿನ್ನೆಲೆಯಲ್ಲಿ ಒಬ್ಬನನ್ನು ಬಂಧಿಸಿರುವ ಪೊಲೀಸರು ಉಳಿದವರ ಹುಡುಕಾಟ ನಡೆಸುತ್ತಿದ್ದಾರೆ. ಇದರೊಂದಿಗೆ ಹಿಂದಿನ ಕುಲಪತಿ ಮಹೇಶಪ್ಪ ಅವರ ಬಂಧನ ಕೂಡ ಆಗುವ ಸಾಧ್ಯತೆ ಇದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ