ಬೆಳಗಾವಿ: ಇದೇ 21ರಿಂದ ಡಿ.2ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಅಗತ್ಯವಿರುವ ಊಟ, ವಸತಿ, ವಾಹನ ಸೇರಿದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಸ್.ಮೂರ್ತಿ ಹೇಳಿದರು.
ಶನಿವಾರ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ಸಿದ್ಧತೆಗಳನ್ನು ಪರಿಶೀಲಿಸಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದರು.
ಅಧಿವೇಶನಕ್ಕೆ ಸಚಿವರು, ಶಾಸಕರು, ಅಧಿಕಾರಿಗಳು, ಗಣ್ಯರು 7 ಸಾವಿರ ಜನ ಆಗಮಿಸಲಿದ್ದು, ಬೆಳಗಾವಿ ಹಾಗೂ ಹುಬ್ಬಳ್ಳಿ ಯ ಹೊಟೇಲ್ ಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಊಟದ ಮೆನು ಹಿಂದಿನ ಇರಲಿದೆ ಎಂದರು. ಸುರಕ್ಷತೆ ದೃಷ್ಟಿಯಿಂದ ಅಂಬುಲೆನ್ಸ್ ಮತ್ತಿತರ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಮಹದಾಯಿ, ಕಳಸಾ ಬಂಡೂರಿ ಸೇರಿದಂತೆ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಅಧಿವೇಶನದ ಮೊದಲ ದಿನ ವ್ಯವಹಾರ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಡಿಸಿ ಎನ್.ಜಯರಾಮ್ ಡೈನಾಮಿಕ್ ಆಫೀಸರ್. ಯಾವುದೇ ಕೆಲಸವನ್ನು ಅಚ್ಚುಕಟ್ಟತನದಿಂದ ಮಾಡುವವರು ಎಂದು ಶ್ಲಾಘಿಸಿದರು