Breaking News
Home / ಬೆಳಗಾವಿ ನಗರ / ನಮ್ಮ ಸಲಹೆಯನ್ನು ಸರ್ಕಾರ ಗಂಭೀರವಾಗಿ ಸ್ವೀಕರಿಸಿಲ್ಲ.-ಯಡಿಯೂರಪ್ಪ

ನಮ್ಮ ಸಲಹೆಯನ್ನು ಸರ್ಕಾರ ಗಂಭೀರವಾಗಿ ಸ್ವೀಕರಿಸಿಲ್ಲ.-ಯಡಿಯೂರಪ್ಪ

ಬೆಳಗಾವಿ-ಐತಿಹಾಸಿಕ ಬೆಳಗಾವಿಯಲ್ಲಿ ಬಿಜೆಪಿಯ ೨ ನೇ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯುತ್ತಿದೆ. ಕಾರ್ಯಕಾರಿಣಿಯಲ್ಲಿ ಕೇಂದ್ರ ಸಚಿವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕಾರಿಣಿಯಲ್ಲಿ ಪ್ರಚಲಿತ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ. ರೈತರ ಸಮಸ್ಯೆ,ಕುರಿತು ಚರ್ಚೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ

ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ವೀರ ರಾಣಿ ಕಿತ್ತೂರ ಚನ್ನಮ್ಮಾಜಿ ಹಾಗು ಭಾರತ ರತ್ನ ಬಾಬಾ ಸಾಹೇಬ   ಅಂಬೇಡ್ಕರ ಅವರ ಪ್ರತ5ಮೆಗೆ ಪುಷ್ಪಗೌರವ ಸಲ್ಲಿಸಿ ಮಾದ್ಯಮಗಳ ಜೊತೆ ಮಾತನಾಡಿದ ಅವರುಕಾವೇರಿ ಸಮಸ್ಯೆ ಇತ್ಯರ್ಥ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ.ಈ ವಿಚಾರದಲ್ಲಿ ನಮ್ಮ ಸಲಹೆಯನ್ನು ಸರ್ಕಾರ ಗಂಭೀರವಾಗಿ ಸ್ವೀಕರಿಸಿಲ್ಲ.ಎಂದು ಆರೋಪಿಸಿದ ಯಡಿಯೂರಪ್ಪ ನಾಳೆ ನಡೆಯಲಿರುವ ವಿಶೇಷ  ಅಧಿವೇಶನದಲ್ಲಿ ಬಿಜೆಪಿಯ ಎಲ್ಲ ಶಾಸಕರು ಭಾಗವಹಿಸುತ್ತಾರೆ ಎಂದು ಅವರು ತಿಳಿಸಿದರು

ಕಾವೇರಿ ನಿರ್ವಹಣೆ ಮಂಡಳಿ ಸ್ಥಾಪನೆಗೆ ನಮ್ಮ ವಿರೋಧವಿದೆ. ಈ ಬಗ್ಗೆ ಕೇಂದ್ರ ಮೇಲೆ ಸಹ ಒತ್ತಡ ತರಲಾವುದು. ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸ್ಥಾಪನೆ ವಿಚಾರ. ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲ್ಲ. ಎಂದು ಯಡಿಯೂರಪ್ಪ ಹೇಳಿದರು

ಸಂಸದ ಸುರೇಶ ಅಂಗಡಿ ಮಾಜಿ ಸಚಿವ ಉಮೇಶ ಕತ್ತಿ ಲಕ್ಷ್ಮಣ ಸವದಿ ಮಹಾಂತೇಶ ಕವಟಗಿಮಠ ಸಂಜಯ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು

Check Also

ಜಿಲ್ಲೆಯಲ್ಲಿ ಸುರಿದ ಮೊದಲ ಮಳೆಗೆ ಮೊದಲ ಬಲಿ…

ಬೆಳಗಾವಿ- ಸವದತ್ತಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು ಸಿಡಿಲು ಬಡಿದು ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ …

Leave a Reply

Your email address will not be published. Required fields are marked *