ಬೆಳಗಾವಿ- ಬೆಳಗಾವಿ ಜಿಲ್ಲೆಯ ನಾಲ್ಕು ಪ್ರಮುಖ ದೇವಸ್ಥಾನಗಳನ್ನು ಓಪನ್ ಮಾಡುವಂತೆ ಆದೇಶ ಹೊರಬಿದ್ದ ಬೆನ್ನಲ್ಲಿಯೇ ಬೆಳಗಾವಿ ಜಿಲ್ಲಾಧಿಕಾರಿಗಳು ಈಗ ಮತ್ತೊಂದು ಆದೇಶವನ್ನು ಹೊರಡಿಸಿದ್ದಾರೆ.
ನಿನ್ನೆಯ ದಿನ ಜಿಲ್ಲಾಧಿಕಾರಿಗಳು ಸವದತ್ತಿ ಯಲ್ಲಮ್ಮ ದೇವಿ,ದೇವಸ್ಥಾನ ಹೊರತುಪಡಿಸಿ ಉಳಿದ ನಾಲ್ಕು ಪ್ರಮುಖ ದೇವಸ್ಥಾನಗಳನ್ನು ಓಪನ್ ಮಾಡುವಂತೆ ಆದೇಶ ಹೊರಡಿಸಿದ್ದರು. ಆದ್ರೆ ಭಕ್ತರ,ಮತ್ತು ಜನಪ್ರತಿನಿಧಿಗಳ ಮನವಿಗೆ ಸ್ಪಂದಿಸಿದ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ ಅವರು ಇಂದು ಸವದತ್ರಿ ಯಲ್ಲಮ್ಮದೇವಿ ದೇವಸ್ಥಾನ ಓಪನ್ ಮಾಡುವಂತೆ ಆದೇಶ ಹೊರಡಿಸಿದ್ದು ಬೆಳಗಾವಿ ಜಿಲ್ಲೆಯ ಎಲ್ಲ ಪ್ರಮುಖ ದೇವಸ್ಥಾನಗಳು ಭಕ್ತರ ದರ್ಶನಕ್ಕೆ ಲಭ್ಯವಾಗಿವೆ.
ಸೆಪ್ಟೆಂಬರ್ 28 ರಂದು ಮಂಗಳವಾರ ಬೆಳಿಗ್ಗೆ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನದಲ್ಲಿ ದೇವಿಯ ದರ್ಶನ ಲಭ್ಯವಾಗಲಿದೆ.
ಜಾತ್ರೆ,ಉತ್ಸವ ಮಾಡದಂತೆ ನಿರ್ಬಂಧ ಹೇರಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ